HomeCrime Newsದೊಡ್ಡಬಳ್ಳಾಪುರ: ಟ್ಯಾಂಕರ್ʼಗೆ ಟಾಟಾ ಏಸ್ ವಾಹನ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಟ್ಯಾಂಕರ್ʼಗೆ ಟಾಟಾ ಏಸ್ ವಾಹನ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

For Dai;y Updates Join Our whatsapp Group

Spread the love

ದೊಡ್ಡಬಳ್ಳಾಪುರ: ಹೆದ್ದಾರಿ ಬದಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಟ್ಯಾಂಕರ್ʼಗೆ  ಟಾಟಾ ಏಸ್ ವಾಹನ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹೊಸಕೋಟೆ ದಾಬಸ್ ಪೇಟೆಯ ಹೆದ್ದಾರಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ನಡೆದಿದೆ.

ತ್ಯಾಮಗೋಂಡ್ಲು ಮೂಲದ ಕಾರ್ತಿಕ್ (30) ಗಂಭೀರ ಗಾಯಗೊಂಡ ಚಾಲಕನಾಗಿದ್ದು, ಹೆದ್ದಾರಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ದಾಬಸ್ ಪೇಟೆ ಕಡೆಯಿಂದ ಬಂದ ಟಾಟಾ ಏಸ್ ಗೂಡ್ಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಗೂಡ್ಸ್ ವಾಹನ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಗಾಯಾಳು ಚಾಲಕನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!