ಬೆಂಗಳೂರು: ಲಕ್ಷಗಟ್ಟಲೆ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿಮಾಡಿದ್ದಕ್ಕೆ ಅಂಗಡಿ ಮಾಲೀಕರು ಕಂಗೆಟ್ಟುಹೋಗಿದ್ದಾರೆ. ವಾಣಿಜ್ಯ ಇಲಾಖೆ ತೆರಿಗೆ ನೋಟಿಸ್‌ಗೆ ವರ್ತಕರಿಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಯುಪಿಐ ಬದಲು ಕ್ಯಾಷ್ ಪಡೆಯಲು ಸಣ್ಣ ಸಣ್ಣ ವ್ಯಾಪಾರಿಗಳು ಮುಂದಾಗಿದ್ದಾರೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅರ್ಥಿಕ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖ ಸಚಿವರು ಭಾಗಿಯಾಗುವ ಸಾಧ್ಯತೆ ಇದೆ.
ಇನ್ನೂ ವಾಣಿಜ್ಯ ತೆರಿಗೆ ಇಲಾಖೆಯ “ತೆರಿಗೆ ನೋಟಿಸ್” ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ನಗರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ.