ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ: ಜಿ.ಪರಮೇಶ್ವರ್

0
Spread the love

ಬೆಂಗಳೂರು: ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್​ ಕಾರ್ಡ್ ಪಡೆಯಲು ಅರ್ಹರಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಬಿಪಿಎಲ್​​ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ. ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್​ ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ. ಸುಳ್ಳು ದಾಖಲೆ ಸಲ್ಲಿಸಿ, ಅಧಿಕಾರಿಗಳ ಮನವೊಲಿಸಿ ಕಾರ್ಡ್ ಪಡೆದಿರುವುದು ತಪ್ಪಲ್ಲವೇ?. ಯಾರ ಕಾರ್ಡ್‌ನ್ನು ತೆಗೆಯಲು ಹೋಗುವುದಿಲ್ಲ’ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

Advertisement

ಇನ್ನೂ ಅಮೆರಿಕದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ. ಅವರು ಕುಟುಂಬ ಸಮೇತ ಅಮೆರಿಕ ಪ್ರವಾಸ ಹೋಗಿದ್ದಾರೆ. ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಅವರಿಗೆ ಸತ್ಕರಿಸಿರುತ್ತಾರೆ. ಅದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here