ಟಿಬಿ ಡ್ಯಾಂ ಗೇಟ್ ದುರಸ್ತಿ ಕಾರ್ಯ; ಮೂರನೇ ಎಲಿಮೆಂಟ್ ಅಳವಡಿಕೆ ಯಶಸ್ವಿ

0
Spread the love

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿದ್ದರಿಂದ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಬಳಿಕ ಡ್ಯಾಂ​​​ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನೂರಾರು ಸಿಬ್ಬಂದಿ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿ, ಮೂರನೇ ಎಲಿಮೆಂಟ್​ನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಟಿ.ಬಿ ಡ್ಯಾಂ ಕ್ರಸ್ಟ್ ಗೇಟ್ 19 ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಮಾಡಿ ನಿಟ್ಟುಸಿರು ಬಿಡಲಾಗಿತ್ತು. ಇಂದು 3 ಸ್ಟಾಪ್ ಲಾಗ್ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ. 3 ದಿನ ಸತತ 30 ಗಂಟೆ ಕಾರ್ಯಾಚರಣೆ ಇದಾಗಿದ್ದು, TB ಡ್ಯಾಂ ಅಧಿಕಾರಿಗಳು ಈಗ ಜಲಾಶಯದ ಸಂಪೂರ್ಣ ಹೊರ ಹರಿವು ಬಂದ್ ಮಾಡಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here