ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಗುಡುಗು-ಸಿಡಿಲಿನ ಭಾರೀ ಶಬ್ದಕ್ಕೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ನಾಗರಾಜಪ್ಪ (56) ಮೃತಪಟ್ಟ ಶಿಕ್ಷಕ. ಅವರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ರಾತ್ರಿ ಮನೆಯ ಮುಂದೆ ನಿಂತಿದ್ದ ವೇಳೆ ಏಕಾಏಕಿ ಭಾರೀ ಸಿಡಿಲು ಬಡಿದಿದೆ.
ಸಿಡಿಲಿನ ಆಘಾತಕಾರಿ ಶಬ್ದಕ್ಕೆ ನಾಗರಾಜಪ್ಪ ಬೆಚ್ಚಿಬಿದ್ದಿದ್ದು, ತಕ್ಷಣವೇ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆಯಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



