HomeGadag Newsಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಿ : ವೈಶಾಲಿ ಎಂ.ಎಲ್

ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಿ : ವೈಶಾಲಿ ಎಂ.ಎಲ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಜೂನ್ 30ರಂದು ಜರುಗುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟಿಇಟಿ ಪರೀಕ್ಷೆಯು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ, ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಮಾತನಾಡಿ, ಟಿಇಟಿ ಪರೀಕ್ಷೆಯು ಜೂನ್ 30ರಂದು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಪ್ರಥಮ ಅಧಿವೇಶನ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ದ್ವಿತೀಯ ಅಧಿವೇಶನ ಮಧ್ಯಾಹ್ನ 2ರಿಂದ ಸಂಜೆ 4.30 ಜರುಗಲಿದೆ.

ಅಧಿವೇಶನ-1ರ ಪರೀಕ್ಷೆ 11 ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2ರ ಪರೀಕ್ಷೆ 17 ಕೇಂದ್ರಗಳಲ್ಲಿ ನಡೆಯಲಿದೆ ಎಂದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್, ಮಾರ್ಗಾಧಿಕಾರಿಗಳ ವಾಹನಕ್ಕೆ ಎಸ್ಕಾರ್ಟ್ ವ್ಯವಸ್ಥೆ, ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಡಯಟ್ ಪ್ರಾಚಾರ್ಯ ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಥಮ ಅಧಿವೇಶನದಲ್ಲಿ 2716 ಅಭ್ಯರ್ಥಿಗಳು ಹಾಗೂ ದ್ವಿತೀಯ ಅಧಿವೇಶನದಲ್ಲಿ 4612 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ 9 ಮಾರ್ಗಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮಾರ್ಗಾಧಿಕಾರಿಗಳಿಗೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಮತ್ತು ಸ್ಥಾನಿಕ ಜಾಗೃತದಳದ ಅಧಿಕಾರಿಗಳ ನೇಮಕಾತಿ ಮಾಡಲಾಗಿದೆ ಎಂದು ಎಂ.ಎ. ರಡ್ಡೇರ ಸಭೆಗೆ ವಿವರಿಸಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!