ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ.
ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಕರಡು ಗೆಜೆಟ್ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ.
ಅಧಿಸೂಚನೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರವು 15 ದಿನಗಳ ಕಾಲಾವಕಾಶ ನೀಡಿದೆ. ಅಂತಿಮ ಅಧಿಸೂಚನೆ ಬಳಿಕ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ.
ಒಟ್ಟು 15 ಸಾವಿರ ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 6,905 ಹುದ್ದೆಗಳು ಹಾಗೂ ಇತರೆ ಜಿಲ್ಲೆಗಳಿಗೆ 8,095 ಹುದ್ದೆಗಳು ಮೀಸಲಿಡಲಾಗಿದೆ.
ಇತರೆ ಜಿಲ್ಲೆಗಳ ಹುದ್ದೆಗಳ ವಿವರ:
- ಜಿಪಿಟಿ: 5,272 ಹುದ್ದೆಗಳು
- ಪ್ರೌಢಶಾಲಾ ಶಿಕ್ಷಕರು: 2,286 ಹುದ್ದೆಗಳು
- PST: 100 ಹುದ್ದೆಗಳು
- ಕಂಪ್ಯೂಟರ್ ಸೈನ್ಸ್ ಶಿಕ್ಷಕರು: 200 ಹುದ್ದೆಗಳು
- PE ಗ್ರೇಡ್-1: 131 ಹುದ್ದೆಗಳು
- PE ಗ್ರೇಡ್-2: 106 ಹುದ್ದೆಗಳು
- ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ವಿವರ:
- ಜಿಪಿಟಿ (GPT): 3,228 ಹುದ್ದೆಗಳು
- ಪ್ರೌಢಶಾಲಾ ಶಿಕ್ಷಕರು: 2,214 ಹುದ್ದೆಗಳು
- PST: 800 ಹುದ್ದೆಗಳು
- ಕಂಪ್ಯೂಟರ್ ಸೈನ್ಸ್ ಶಿಕ್ಷಕರು: 300 ಹುದ್ದೆಗಳು
- PE ಗ್ರೇಡ್-1: 319 ಹುದ್ದೆಗಳು
- PE ಗ್ರೇಡ್-2: 44 ಹುದ್ದೆಗಳು
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಈ ಬೃಹತ್ ನೇಮಕಾತಿ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಅಂತಿಮ ಅಧಿಸೂಚನೆ ಹಾಗೂ ಅರ್ಜಿ ಪ್ರಕ್ರಿಯೆ ಕುರಿತು ಸರ್ಕಾರದ ಅಧಿಕೃತ ಮಾಹಿತಿಯನ್ನು ಗಮನಿಸುವಂತೆ ಸೂಚಿಸಲಾಗಿದೆ.



