ಬೆಂಗಳೂರು:– ಸಮೀಕ್ಷೆಗೆಂದು ಹೋದ ವೇಳೆ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಜರುಗಿದೆ.
Advertisement
ಸಮೀಕ್ಷೆಗೆಂದು ಹೋದ ಶಾಲಾ ಶಿಕ್ಷಕಿ ಯಶೋಧ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಇವರು ಬೊಮ್ಮಸಂದ್ರದ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಬೊಮ್ಮಸಂದ್ರದ ಗಣತಿಯ ಜವಾಬ್ದಾರಿ ಹೊತ್ತಿದ್ದರು. ಸಮೀಕ್ಷೆ ನಡೆಸುತ್ತಿರುವಾಗಲೇ ಕುಸಿದು ಬಿದ್ದಿದ್ದ ಶಿಕ್ಷಕಿಯನ್ನು ಸ್ಥಳೀಯರು ಕೂಡಲೆ ಆಸ್ಪತ್ರೆಗೆ ರವಾನಿಸಿದ್ದಾರೆ.
ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟಂಟ್ ಅಳವಡಿಸಿದ್ದಾರೆ. ಸಮೀಕ್ಷೆಯ ಕಾರಣದಿಂದಾಗಿ ಗ್ರಾಮದ ಮನೆ ಮನೆಗೆ ತೆರಳಿ ತನಗೊಪ್ಪಿಸಿದ ಕೆಲಸ ಮಾಡುತ್ತಿದ್ದ ಶಿಕ್ಷಕಿ ತೀವ್ರ ಒತ್ತಡದಿಂದ ಹೃದಯಾಗಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.