ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಮುಗಿದ ತಕ್ಷಣ ಟಿ20 ಸರಣಿ ಆರಂಭವಾಗಲಿದೆ. ಡಿಸೆಂಬರ್ 9ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರ ಟೀಮ್ ಇಂಡಿಯಾ ಘೋಷಿಸಲಾಗಿದೆ. ಈ ಬಾರಿ ತಂಡದ ಆಯ್ಕೆಯಲ್ಲಿ ಗಮನ ಸೆಳೆದ ವಿಷಯವೆಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ ಇಬ್ಬರು ಯುವ ಆಟಗಾರರಿಗೆ ಸ್ಥಾನ ದೊರಕಿಲ್ಲ.
ಏಷ್ಯಾ ಕಪ್ ನಂತರ ತಂಡದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಮರುಪ್ರವೇಶ ಮಾಡಿದ್ದಾರೆ. ಅವರ ಕಂಬ್ಯಾಕ್ನ ಪರಿಣಾಮವಾಗಿ ಇಬ್ಬರು ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ.
ನಿತೀಶ್ ಕುಮಾರ್ ರೆಡ್ಡಿ
ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಈವರೆಗೆ ಭಾರತ ಪರ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಕಳೆದ ತಿಂಗಳ ಸರಣಿಯಲ್ಲೂ ಆಡಿದ ಅವರು, ಈ ಬಾರಿ ಹಾರ್ದಿಕ್ ಪಾಂಡ್ಯ ಮರುಪ್ರವೇಶದಿಂದಾಗಿ ಆಯ್ಕೆಯಿಂದ ಹೊರಗುಳಿದಿದ್ದಾರೆ.
ರಿಂಕು ಸಿಂಗ್
35 ಟಿ20 ಪಂದ್ಯಗಳಲ್ಲಿ ಭಾರತ ಪರ ಉತ್ತಮ ಪ್ರದರ್ಶನ ನೀಡಿರುವ ರಿಂಕು ಸಿಂಗ್ ಕೂಡ ಈ ಸರಣಿಗೆ ಆಯ್ಕೆಯಾಗಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಭಾಗಿಯಾಗಿದ್ದರೂ, ಈ ಬಾರಿ ಅವರನ್ನು ತಂಡಕ್ಕೆ ಪರಿಗಣಿಸಲಾಗಿಲ್ಲ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.



