HomeSports Newsಜಿಂಬಾಬ್ವೆ ವಿರುದ್ಧ ಮೊದಲ ಟಿ20ಗೆ ಟೀಂ ಇಂಡಿಯಾ ಸಜ್ಜು: ವೈಭವ್ ಸೂರ್ಯವಂಶಿಗೆ ಅವಕಾಶ, ರಿಂಕು ಸಿಂಗ್...

ಜಿಂಬಾಬ್ವೆ ವಿರುದ್ಧ ಮೊದಲ ಟಿ20ಗೆ ಟೀಂ ಇಂಡಿಯಾ ಸಜ್ಜು: ವೈಭವ್ ಸೂರ್ಯವಂಶಿಗೆ ಅವಕಾಶ, ರಿಂಕು ಸಿಂಗ್ ಕಮ್ ಬ್ಯಾಕ್ ಸಾಧ್ಯತೆ!

ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಜುಲೈ 23ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಜಿಂಬಾಬ್ವೆ ತಲುಪಿದ್ದು, ಸರಣಿಗಾಗಿ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿ ಸೋಲಿನಿಂದ ನಿರಾಸೆ ಅನುಭವಿಸಿರುವ ಭಾರತ, ಇದೀಗ ಜಿಂಬಾಬ್ವೆ ವಿರುದ್ಧ ಗೆಲುವಿನ ಮೂಲಕ ಪುಟಿದೇಳುವ ಗುರಿ ಹೊಂದಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ತಂಡಕ್ಕೆ ಈ ಸರಣಿ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಮೊದಲ ಟಿ20 ಪಂದ್ಯಕ್ಕಾಗಿ ಸಂಭಾವ್ಯ ಪ್ಲೇಯಿಂಗ್-11 ಕೂಡ ಬಹುತೇಕ ಅಂತಿಮಗೊಂಡಿದೆ. ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ರಿಂಕು ಸಿಂಗ್ ಕೂಡ ತಂಡಕ್ಕೆ ಮರಳುವ ನಿರೀಕ್ಷೆಯಿದೆ.

ಸಂಜು ಸ್ಯಾಮ್ಸನ್ ಈ ಸರಣಿಗೆ ಆಯ್ಕೆಯಾಗದ ಹಿನ್ನೆಲೆಯಲ್ಲಿ, ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಆರಂಭಿಕ ಬ್ಯಾಟರ್‌ಗಳಾಗಿ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್, ನಾಯಕ ಶ್ರೇಯಸ್ ಅಯ್ಯರ್ ಹಾಗೂ ತಿಲಕ್ ವರ್ಮಾ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದ್ದಾರೆ.

ಇತ್ತೀಚಿನ ಸರಣಿಗಳಲ್ಲಿ ಅವಕಾಶದಿಂದ ವಂಚಿತರಾಗಿದ್ದ ರಿಂಕು ಸಿಂಗ್‌ಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಶಿವಂ ದುಬೆ ಆಲ್‌ರೌಂಡರ್ ಪಾತ್ರದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಲಿದ್ದು, ತಂಡದ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ.

ಬೌಲಿಂಗ್ ವಿಭಾಗದಲ್ಲೂ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಯುವ ಆಲ್‌ರೌಂಡರ್ ಹರ್ಷ ದುಬೆ ಭಾರತ ಪರ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಕಳೆದ ಎರಡು ವರ್ಷಗಳಿಂದ ಗಾಯದ ಸಮಸ್ಯೆಯಿಂದ ತಂಡದಿಂದ ದೂರವಿದ್ದ ವೇಗಿ ಮಯಾಂಕ್ ಯಾದವ್ ಕೂಡ ತಂಡಕ್ಕೆ ಮರಳಿದ್ದು, ಮೊದಲ ಪಂದ್ಯದಲ್ಲೇ ಅವಕಾಶ ಪಡೆಯುವ ನಿರೀಕ್ಷೆಯಿದೆ. ವೇಗದ ಬೌಲಿಂಗ್ ವಿಭಾಗದಲ್ಲಿ ಪ್ರಿನ್ಸ್ ಯಾದವ್ ಜೊತೆಗೆ ಅಶೋಕ್ ಶರ್ಮಾ ಅಥವಾ ಯಶ್ ಠಾಕೂರ್ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ಇದುವರೆಗೆ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಅವರ ನಾಯಕತ್ವದಲ್ಲಿ ಆಡಿದ ಆರು ಪಂದ್ಯಗಳಲ್ಲೂ ಭಾರತ ಸೋಲು ಕಂಡಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಜಿಂಬಾಬ್ವೆ ವಿರುದ್ಧದ ಈ ಸರಣಿ ಶ್ರೇಯಸ್ ಅಯ್ಯರ್ ಹಾಗೂ ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ಮೊದಲ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್-11:

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಹರ್ಷ ದುಬೆ, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ/ಯಶ್ ಠಾಕೂರ್, ಮಯಾಂಕ್ ಯಾದವ್.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img