ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಟೀಂ ಇಂಡಿಯಾ ಸಜ್ಜು: ಗಿಲ್–ಹಾರ್ದಿಕ್ ರೀ-ಎಂಟ್ರಿ, ರಿಂಕು ಸಿಂಗ್ ಔಟ್!

0
Spread the love

ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.

Advertisement

ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಗಿಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಅವರ ಅಂತಿಮ ಭಾಗವಹಿಸುವಿಕೆ ಫಿಟ್ನೆಸ್ ಪರೀಕ್ಷೆಯ ಫಲಿತಾಂಶದ ಮೇಲೆ ಅವಲಂಬಿತವಾಗಿರಲಿದೆ. ಮೊದಲ ಟೆಸ್ಟ್‌ನಲ್ಲಿ ಗಾಯಗೊಂಡ ಗಿಲ್, ನಂತರದ ಟೆಸ್ಟ್ ಮತ್ತು ಏಕದಿನ ಸರಣಿಯಿಂದ ಹೊರಗುಳಿದಿದ್ದರು.

ಹಾರ್ದಿಕ್ ಪಾಂಡ್ಯ ಕೂಡ ಸುಮಾರು ಎರಡು ತಿಂಗಳ ಬಳಿಕ ತಂಡಕ್ಕೆ ಮರಳುತ್ತಿದ್ದಾರೆ. ಏಷ್ಯಾಕಪ್‌ನ ಫೈನಲ್‌ಗೆ ಮುನ್ನ ಗಾಯಗೊಂಡ ಅವರು, ಇತ್ತೀಚಿನ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ತೋರಿಸಿ ಫಿಟ್ನೆಸ್ ಸಾಬೀತುಪಡಿಸಿದ್ದರು.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಆಸ್ಟ್ರೇಲಿಯಾದಲ್ಲಿ ಆಡಿದ ಟಿ20 ತಂಡವನ್ನೇ ಬಹುತೇಕ ಮುಂದುವರಿಸಿದೆ. ಆದರೆ ಈ ಬಾರಿ ರಿಂಕು ಸಿಂಗ್ ಅವರನ್ನು ಕೈಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ. ಈ ವರ್ಷ ಐದು ಟಿ20 ಪಂದ್ಯಗಳಲ್ಲಿ ಭಾಗವಹಿಸಿದ್ದರೂ, ಅವಕಾಶದ ಕೊರತೆ ಮತ್ತು ತಂಡದ ಸಮತೋಲನದ ದೃಷ್ಟಿಯಿಂದ ಅವರನ್ನು ಬಿಟ್ಟಿರುವುದಾಗಿ ತಿಳಿದುಬಂದಿದೆ. ನಿತೀಶ್ ಕುಮಾರ್ ರೆಡ್ಡಿ ಕೂಡ ತಂಡದಿಂದ ಹೊರಗುಳಿದಿದ್ದಾರೆ.

ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.


Spread the love

LEAVE A REPLY

Please enter your comment!
Please enter your name here