Champions Trophy 2025: ಟಾಸ್ ಸೋತ ಟೀಂ ಇಂಡಿಯಾ: ಬಾಂಗ್ಲಾ ಬ್ಯಾಟಿಂಗ್ ಆಯ್ಕೆ

0
Spread the love

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯಕ್ಕೆ ಸಜ್ಜಾಗಿದ್ದು, ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೋ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

Advertisement

ಅದರಂತೆ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಐವರು ಬ್ಯಾಟರ್​ಗಳು, ಮೂವರು ಆಲ್​ರೌಂಡರ್​ಗಳು ಹಾಗೂ ಮೂವರು ಪರಿಪೂರ್ಣ ಬೌಲರ್​ಗಳಿಗೆ ಸ್ಥಾನ ನೀಡಲಾಗಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ.

ಬಾಂಗ್ಲಾದೇಶ್ 11: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂತೋ (ನಾಯಕ), ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಝುರ್ ರಹಮಾನ್.

ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಇಂದಿನಿಂದ 2025 ರ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸುತ್ತಿವೆ. ಈ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆಯಾದರೂ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.


Spread the love

LEAVE A REPLY

Please enter your comment!
Please enter your name here