India Women’s Cricket: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ದಾಖಲೆ ಗೆಲುವು ಸಾಧಿಸಿದ ಟೀಮ್ ಇಂಡಿಯಾ!

0
Spread the love

ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಮಹಿಳಾ ತಂಡವು ಬರೋಬ್ಬರಿ 97 ರನ್​ಗಳ ದಾಖಲೆಯ ಗೆಲುವು ದಾಖಲಿಸಿದೆ. ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ಭಾರತ ಮಹಿಳಾ ತಂಡ ಬರೋಬ್ಬರಿ 97 ರನ್​ಗಳ ದಾಖಲೆಯ ಗೆಲುವು ದಾಖಲಿಸಿದೆ.

Advertisement

ಭಾರತ ನೀಡಿದ 210 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ವನಿತಾ ಪಡೆ, ಸ್ಮೃತಿ ಪಡೆಯ ಮಾರಕ ದಾಳಿಗೆ ತತ್ತರಿಸಿ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 113 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಏಕಾಂಗಿ ಹೋರಾಟ ನೀಡಿ 66 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲಾಗಲಿಲ್ಲ. ಇತ್ತ ಭಾರತದ ಪರ ನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿದರೆ, ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಶ್ರೀ ಚರಣಿ 4 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಲಭಿಸಿತು. ನಾಯಕಿ ಸ್ಮೃತಿ ಮಂಧಾನ ಹಾಗೂ ಯುವ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮೊದಲ ವಿಕೆಟ್​ಗೆ 77 ರನ್‌ಗಳ ಸ್ಫೋಟಕ ಜೊತೆಯಾಟ ಹಂಚಿಕೊಂಡರು. ಆದಾಗ್ಯೂ, 8 ತಿಂಗಳ ನಂತರ ತಂಡಕ್ಕೆ ಮರಳಿದ ಶೆಫಾಲಿ ಈ ಬಾರಿಯೂ ತಮ್ಮ ಬ್ಯಾಟಿಂಗ್‌ನಿಂದ ಅದ್ಭುತಗಳನ್ನು ಮಾಡಲು ಸಾಧ್ಯವಾಗದೆ 22 ಎಸೆತಗಳಲ್ಲಿ ಕೇವಲ 20 ರನ್‌ ಗಳಿಸಿ ಔಟಾದರು. ಆದರೆ ಶೆಫಾಲಿ ವಿಕೆಟ್ ಪತನದ ಬಳಿಕ ಬಂದ ಹರ್ಲೀನ್ ಡಿಯೋಲ್, ಮಂಧಾನಗೆ ಉತ್ತಮ ಸಾಥ್ ನೀಡಿದರು. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸುಮಾರು 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 94 ರನ್‌ ಕಲೆಹಾಕಿದರು. ಇದೇ ವೇಳೆ ನಾಯಕಿ ಮಂಧಾನ ಕೇವಲ 51 ಎಸೆತಗಳಲ್ಲಿ ತಮ್ಮ ಮೊದಲ ಟಿ20 ಅಂತರರಾಷ್ಟ್ರೀಯ ಶತಕ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.


Spread the love

LEAVE A REPLY

Please enter your comment!
Please enter your name here