ಬಹು ನಿರೀಕ್ಷಿತ ಏಷ್ಯಾಕಪ್ ಆರಂಭಕ್ಕೆ ಕೌಂಟ್ಡೌನ್ ಶುರುವಾಗಿದೆ. ಈ ಮಹತ್ವದ ಟೂರ್ನಿಗಾಗಿ ತಂಡಗಳನ್ನು ಪ್ರಕಟಿಸಿರುವ ಪಾಕ್, ಅಫ್ಘಾನ್, ಬಾಂಗ್ಲಾ ಅಭ್ಯಾಸದ ಅಖಾಡಕ್ಕೂ ಇಳಿದಿವೆ. ಈ ನಡುವೆ ಏಷ್ಯಾಕಪ್ನ ಟೀಮ್ ಇಂಡಿಯಾ ತಂಡ ಕೂಡ ಪ್ರಕಟ ಮಾಡಿದೆ.
15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.
ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದ್ದರೆ, ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನು ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರನ್ನು ನೋಡುವುದಾದರೆ, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡರೆ, ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ. ಅದರಂತೆ ಏಷ್ಯಾಕಪ್ಗೆ ಭಾರತ ಟಿ20 ತಂಡ ಈ ಕೆಳಗಿನಂತಿದೆ…
ಏಷ್ಯಾ ಕಪ್ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.



