ICC Womens T20 World Cup: ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಅಷ್ಟು ಸುಲಭವಲ್ಲ!

0
Spread the love

ಮಹಿಳಾ ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

Advertisement

ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ, ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳನ್ನು ಬಗ್ಗು ಬಡಿದಿದೆ.

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿತ್ತು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕಿಯ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟಿಂಗ್ ಪ್ರದರ್ಶಿಸಿದ ಶಫಾಲಿ ವರ್ಮಾ (43) ಹಾಗೂ ಸ್ಮೃತಿ ಮಂಧಾನ (50) ಮೊದಲ ವಿಕೆಟ್​ಗೆ 98 ರನ್​ಗಳ ಜೊತೆಯಾಟವಾಡಿದರು.

ಆ ಬಳಿಕ ಬಂದ ಹರ್ಮನ್​ಪ್ರೀತ್ ಕೌರ್ ಕೇವಲ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 52 ರನ್ ಚಚ್ಚಿದರು. ಈ ಬಿರುಸಿನ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟದೊಂದಿಗೆ 173 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 19.5 ಓವರ್​ಗಳಲ್ಲಿ ಕೇವಲ 90 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 82 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ನೆಟ್ ರನ್ ರೇಟ್ ಕೂಡ ಉತ್ತಮಗೊಂಡಿದೆ.

ಬ್ಯಾಕ್ ಟು ಬ್ಯಾಕ್ ಗೆಲುವುಗಳೊಂದಿಗೆ ನೆಟ್ ರನ್ ರೇಟ್ ಹೆಚ್ಚಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. +0.576 ನೆಟ್ ರನ್ ರೇಟ್ ಹೊಂದಿರುವ ಭಾರತ ತಂಡವು ತನ್ನ ಕೊನೆಯ ಪಂದ್ಯದಲ್ಲೂ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು.

ಏಕೆಂದರೆ ಅತ್ತ ಪಾಕಿಸ್ತಾನ್ ( +0.555) ಹಾಗೂ ನ್ಯೂಝಿಲೆಂಡ್ (-0.050) ತಂಡಗಳು ಸೆಮಿಫೈನಲ್​ ರೇಸ್​ನಲ್ಲಿದೆ. ತಲಾ 2 ಅಂಕಗಳನ್ನು ಹೊಂದಿರುವ ಈ ತಂಡಗಳಿಗೆ ಇನ್ನೂ 2 ಮ್ಯಾಚ್​ಗಳಿವೆ. ಆದರೆ ಟೀಮ್ ಇಂಡಿಯಾಗೆ ಇರುವುದು ಕೇವಲ ಒಂದು ಪಂದ್ಯ ಮಾತ್ರ. ಅಂದರೆ ಕೊನೆಯ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಒಟ್ಟು 6 ಅಂಕಗಳನ್ನು ಹೊಂದಲಿದೆ.

ಒಂದು ವೇಳೆ ಪಾಕಿಸ್ತಾನ್ ಅಥವಾ ನ್ಯೂಝಿಲೆಂಡ್ ತಂಡಗಳು ಮುಂದಿನ ಎರಡು ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 6 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರಬಹುದು. ಹೀಗಾಗಿ ಭಾರತ ತಂಡಕ್ಕೆ ತನ್ನ ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವು ಅನಿವಾರ್ಯ. ಈ ಮೂಲಕ ಅಂಕ ಪಟ್ಟಿಯಲ್ಲಿ ಉತ್ತಮ ನೆಟ್ ರನ್ ರೇಟ್​ನೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿ ಸೆಮಿಫೈನಲ್​ಗೆ ಪ್ರವೇಶಿಸಬಹುದು.

ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಹೀಗಿದೆ:
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಅಮೋಘ ಗೆಲುವು ದಾಖಲಿಸಬೇಕು.
ನ್ಯೂಝಿಲೆಂಡ್ ತಂಡವು ಪಾಕಿಸ್ತಾನ್ ಅಥವಾ ಶ್ರೀಲಂಕಾ ವಿರುದ್ಧ ಸೋಲಬೇಕು.
ಪಾಕಿಸ್ತಾನ್ ತಂಡವು ನ್ಯೂಝಿಲೆಂಡ್ ವಿರುದ್ಧ ಗೆದ್ದು, ಆಸ್ಟ್ರೇಲಿಯಾ ವಿರುದ್ಧ ಸೋಲಬೇಕು.
ಪಾಕಿಸ್ತಾನ್ ಅಥವಾ ನ್ಯೂಝಿಲೆಂಡ್ ಮುಂದಿನ ಪಂದ್ಯಗಳಲ್ಲಿ ಗೆದ್ದರೆ, ನೆಟ್ ರನ್​ ರೇಟ್​ನಲ್ಲಿ ಹಿಂದೆ ಉಳಿಯಬೇಕು.


Spread the love

LEAVE A REPLY

Please enter your comment!
Please enter your name here