ಹಾವೇರಿ:- ನಡುರಸ್ತೆಯಲೇ ಸ್ಕಾರ್ಪಿಯೋ ಕಾರೊಂದು ಧಗ ಧಗನೇ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ NH 48 ರಲ್ಲಿ ಜರುಗಿದೆ.
Advertisement
ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ನಾಲ್ವರು ಜೀವಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಗೋವಾಕ್ಕೆ ಹೋಗಿ ವಾಪಸ್
ಬೆಂಗಳೂರಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ತಾಂತ್ರಿಕ ದೋಷದಿಂದ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸುವಷ್ಟರಲ್ಲಿಯೇ ಸ್ಕಾರ್ಪಿಯೋ ಉರಿದು ಭಸ್ಮವಾಗಿದೆ. ಘಟನೆ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.