ಕೋಲಾರ :- ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶಗೊಂಡ ಘಟನೆ ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿ ಗ್ರಾಮದ ಕೆರೆಯಲ್ಲಿ ಜರುಗಿದೆ.
Advertisement
ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಸಂಜೆ 4 ಗಂಟೆಗೆ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ವಾಯುಸೇನಾ ಹೆಲಿಕಾಪ್ಟರ್ ಯಲಹಂಕದಿಂದ ಚೆನ್ನೈಗೆ ತೆರಳುತ್ತಿತ್ತು. ಆಕಾಶದಲ್ಲಿ ಹಾರುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ತುರ್ತು ಭೂ ಸ್ಪರ್ಶ ಮಾಡಲಾಗಿದೆ.
ಮಹಿಳಾ ಪೈಲಟ್ ಸೇರಿದಂತೆ ಇಬ್ಬರು ಹೆಲಿಕಾಪ್ಟರ್ನಲ್ಲಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ. ರಾತ್ರಿ 10 ಗಂಟೆ ನಂತರ ತಾಂತ್ರಿಕ ದೋಷ ನಿವಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಹಿನ್ನೆಲೆ ಮತ್ತೊಂದು ಹೆಲಿಕಾಪ್ಟರ್ ಸ್ಥಳಕ್ಕೆ ಬಂದಿದೆ.