ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಗ್ಗೆ ತಾಂತ್ರಿಕ ಸಮಸ್ಯೆ ಉಂಟಾದ ಪರಿಣಾಮ ಪ್ರಯಾಣಿಕರು ತೀವ್ರ ತೊಂದರೆಗೆ ಗುರಿಯಾದರು. ಚಲ್ಲಘಟ್ಟದಿಂದ ಹಾಗೂ ವೈಟ್ಫೀಲ್ಡ್ನಿಂದ ಹೊರಟ ಮೆಟ್ರೋ ರೈಲುಗಳು ಎಲ್ಲೆಲ್ಲಿ ಇವೆಯೋ ಆ ನಿಲ್ದಾಣಗಳಲ್ಲಿಯೇ ಸುಮಾರು 10 ನಿಮಿಷಗಳಿಗೂ ಹೆಚ್ಚು ಸಮಯ ನಿಲ್ಲುವಂತಾಯಿತು.
ಮೆಟ್ರೋ ರೈಲು ಸುಮಾರು 10 ನಿಮಿಷಗಳಿಂದಲೂ ನಿಲ್ದಾಣದಲ್ಲಿಯೇ ನಿಂತಿದ್ದು, ಆನಂತರ ಪ್ರಯಾಣ ಆರಂಭಿಸಿತು ಎಂದು ಪ್ರಯಾಣಿಕರು ತಿಳಿಸಿದ್ದಾರೆ.
ಪೀಕ್ ಹವರ್‌ನಲ್ಲಿ ಮೆಟ್ರೋ ಕೈ ಕೊಟ್ಟಿದ್ದರಿಂದ ಪ್ರಯಾಣಿಕರು ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಪರದಾಡಿದ್ದಾರೆ. ಫ್ಲಾಟ್ ಫಾರಂನಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕಿದ್ದು, ಕೆಲಸಕ್ಕೆ ಹೋಗಲಾಗದೇ ಪರದಾಡಿದ್ದಾರೆ. ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು,
ಹೊರ ಬರಲು ಹರಸಾಹಸಪಟ್ಟಿದ್ದಾರೆ. ನೇರಳೆ ಮಾರ್ಗದ ಚಲ್ಲಘಟ್ಟದಿಂದ ವೈಟ್ ಫೀಲ್ಡ್ ಕಡೆ ಸಂಚರಿಸುತ್ತಿದ್ದ ರೈಲು, ಟ್ರ್ಯಾಕ್‌ನ ಅರ್ಧ ಮಾರ್ಗದಲ್ಲಿ ನಿಂತಿದೆ. ಯಾವ ನಿಲ್ದಾಣದ ಬಳಿ ಮೆಟ್ರೋ ರೈಲು ನಿಂತಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲಸ್ಥಗಿತಗೊಂಡ ಮೆಟ್ರೋ ಸೇವೆ ಪುನಾರಾರಂಭಗೊಂಡಿದ್ದು, ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.


