ಸಿವಶ್ರೀ ಸ್ಕಂದಪ್ರಸಾದ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ..!

0
Spread the love

ಬೆಂಗಳೂರು ದಕ್ಷಿಣದ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕೊನೆಗೂ ಹಸೆಮಣೆ ಏರಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಮದುವೆ ನಡೆದಿದ್ದು, ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

Advertisement

ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ಗವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ.

ಮದುವೆಗೆ ಕೇಂದ್ರ ಸಚಿವ ವಿ,ಸೋಮಣ್ಣ ತೆರಳಿ ನವಜೋಡಿಗೆ ಆಶೀರ್ವದಿಸಿದ್ದಾರೆ. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.


Spread the love

LEAVE A REPLY

Please enter your comment!
Please enter your name here