KP Choudhary: ತೆಲುಗಿನ ನಿರ್ಮಾಪಕ ಕೆಪಿ ಚೌಧರಿ ಗೋವಾದಲ್ಲಿ ಸೂಸೈಡ್!

0
Spread the love

ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ತೆಲುಗು ಚಲನಚಿತ್ರ ನಿರ್ಮಾಪಕ 44 ವರ್ಷದ ಕೆಪಿ ಚೌಧರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಚೌಧರಿ ಅವರ ಮೃತದೇಹವು ಸಿಯೋಲಿಮ್ ಗ್ರಾಮದ ಬಾಡಿಗೆ ಆವರಣದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಂತರ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷತ್ ಕೌಶಲ್ ತಿಳಿಸಿದ್ದಾರೆ.

ಚೌಧರಿ ಅವರು, ವೈಯಕ್ತಿಕ ಜೀವನದ ಮತ್ತು ವೃತ್ತಿ ಬದುಕಿನಲ್ಲಿ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದರು. ಈಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ತನಿಖೆ ಬಳಿಕ ಸತ್ಯ ಹೊರಬರಬೇಕಿದೆ.

ರಜನಿಕಾಂತ್ ನಟನೆಯ ‘ಕಬಾಲಿ’ ಸಿನಿಮಾ 2016ರಲ್ಲಿ ಬಿಡುಗಡೆ ಆಗಿತ್ತು. ತಮಿಳಿನ ಈ ಸಿನಿಮಾದ ತೆಲುಗು ವರ್ಷನ್​ ಅನ್ನು ಕೆ.ಪಿ. ಚೌಧರಿ ಅವರು ಬಿಡುಗಡೆ ಮಾಡಿದ್ದರು. ಭಾರಿ ಮೊತ್ತದ ಹಣ ನೀಡಿ ಅವರು ವಿತರಣೆ ಹಕ್ಕುಗಳನ್ನು ಖರೀದಿಸಿದ್ದರು. ಆ ಮೂಲಕ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಚಿತ್ರರಂಗದಲ್ಲಿ ಕೆ.ಪಿ. ಚೌಧರಿ ಅವರು ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದರು.

ಡ್ರಗ್ಸ್ ಪ್ರಕರಣದಲ್ಲಿ ಕೂಡ ಕೆ.ಪಿ. ಚೌಧರಿ ಅವರು ಕುಖ್ಯಾತಿ ಪಡೆದಿದ್ದರು. ಟಾಲಿವುಡ್​ನ ಡ್ರಗ್ಸ್ ಜಾಲದ ಜೊತೆ ಅವರು ನಂಟು ಹೊಂದಿದ್ದರು ಎಂಬ ಆರೋಪ ಇತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರಲ್ಲಿ ಅವರನ್ನು ಬಂಧಿಸಲಾಗಿತ್ತು.


Spread the love

LEAVE A REPLY

Please enter your comment!
Please enter your name here