ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಅರೆಸ್ಟ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಪತಿ ದರ್ಶನ್ ಬಿಡುಗಡೆಗಾಗಿ ಪತ್ನಿ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ.4ರಂದು ಭೀಮನ ಅಮವಾಸ್ಯೆ ಪ್ರಯುಕ್ತ ನಗರದ ಬನಶಂಕರಿ ದೇವಸ್ಥಾನಕ್ಕೆ ಸ್ನೇಹಿತೆ ಜೊತೆ ಭೇಟಿ ನೀಡಿದ್ದು,
Advertisement
ವಿಜಯಲಕ್ಷ್ಮಿ ಸಂಕಲ್ಪ ಪೂಜೆ ಮಾಡಿಸಿದ್ದಾರೆ. ಈಗ ಭೇಟಿ ನೀಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಕಳೆದ ವಾರವಷ್ಟೇ ಕೊಲ್ಲೂರು ಮೂಕಾಂಬಿಕಾ ದೇವಿಗೆ ನವ ಚಂಡಿಕಾ ಯಾಗ ಮಾಡಿಸಿದ್ದರು ವಿಜಯಲಕ್ಷ್ಮಿ. ಅದೇ ದಿನ ದಿನಕರ್ ತೂಗುದೀಪ್ ಕೂಡ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದರು.