ಆನೇಕಲ್:- ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ವಾಹನ ಪಲ್ಟಿ ಆಗಿರುವ ಘಟನೆ ಬನ್ನೇರುಘಟ್ಟ ರಸ್ತೆ ಜೆಲ್ಲಿ ಮಿಷನ್ ಬಳಿ ಜರುಗಿದೆ.
Advertisement
ಘಟನೆಯಿಂದ ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕ ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿ, ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ರಸ್ತೆಗೆ ಕ್ಯಾಂಟರ್ ವಾಹನ ಉರುಳಿ ಬಿದ್ದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉರುಳಿ ಬಿದ್ದ ಕ್ಯಾಂಟರ್ ವಾಹನವನ್ನು ಪೊಲೀಸರು ತೆರವುಗೊಳಿಸಿದ್ದಾರೆ.