HomeBengaluru Newsಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ: ಯಾವ ಪ್ರದೇಶಗಳಲ್ಲಿ, ಎಷ್ಟು ದಿನ ಡ್ರೈ ಡೇ?

ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ: ಯಾವ ಪ್ರದೇಶಗಳಲ್ಲಿ, ಎಷ್ಟು ದಿನ ಡ್ರೈ ಡೇ?

For Dai;y Updates Join Our whatsapp Group

ಬೆಂಗಳೂರು: ದಸರಾ ಮೆರವಣಿಗೆಗಳು ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದ್ದಾರೆ. ಅಕ್ಟೋಬರ್ 21ರಿಂದ ವಿವಿಧ ಸಮಯಗಳಲ್ಲಿ ಈ ನಿರ್ಬಂಧಗಳು ಜಾರಿಗೆ ಬರಲಿವೆ.

ದಸರಾ ಮೆರವಣಿಗೆ ಹಿನ್ನೆಲೆ ಮದ್ಯ ಮಾರಾಟ ಬಂದ್:

ದಸರಾ ಮೆರವಣಿಗೆಗಳ ಹಿನ್ನೆಲೆಯಲ್ಲಿ ಆರ್.ಟಿ. ನಗರ, ಜೆ.ಸಿ. ನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 21ರ ಮಧ್ಯಾಹ್ನ 12 ಗಂಟೆಯಿಂದ ಅಕ್ಟೋಬರ್ 22ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಎಂಎಲ್‌ಸಿ ಚುನಾವಣೆ ಹಿನ್ನೆಲೆ ಡ್ರೈ ಡೇ:

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ದಕ್ಷಿಣ-ಪೂರ್ವ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಅಕ್ಟೋಬರ್ 21ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23ರ ಸಂಜೆ 4 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಆದೇಶವು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಆಗ್ನೇಯ, ನೈಋತ್ಯ, ವಾಯುವ್ಯ, ಈಶಾನ್ಯ, ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಸೇರಿದಂತೆ ನಗರದ ಹಲವು ಪೊಲೀಸ್ ವಿಭಾಗಗಳಿಗೆ ಅನ್ವಯಿಸಲಿದೆ.

ಅಕ್ಟೋಬರ್ 27ರಂದು ಮತ್ತೊಂದು ಡ್ರೈ ಡೇ:

ಮತ ಎಣಿಕೆ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11.59ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ನಿರ್ಬಂಧಗಳು ಮದ್ಯದಂಗಡಿಗಳು, ಬಾರ್‌ಗಳು, ಪಬ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಮಳಿಗೆಗಳಿಗೆ ಅನ್ವಯಿಸಲಿವೆ. ಆದರೆ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವನೆಗೆ ಅವಕಾಶವಿರಲಿದೆ. ಪೊಲೀಸ್ ಇಲಾಖೆಯ ಆದೇಶಗಳನ್ನು ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಪಾಲಿಸುವಂತೆ ಸೂಚಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img