HomeIndia Newsಮುಂಗಾರು ಅಧಿವೇಶನದ ಮೊದಲ ದಿನವೇ ಉದ್ವಿಗ್ನ ಪರಿಸ್ಥಿತಿ; ‘ಚಲೋ ಸಂಸತ್’ ಮೆರವಣಿಗೆ ತಡೆದ ಪೊಲೀಸರು, ಹಲವರು...

ಮುಂಗಾರು ಅಧಿವೇಶನದ ಮೊದಲ ದಿನವೇ ಉದ್ವಿಗ್ನ ಪರಿಸ್ಥಿತಿ; ‘ಚಲೋ ಸಂಸತ್’ ಮೆರವಣಿಗೆ ತಡೆದ ಪೊಲೀಸರು, ಹಲವರು ವಶಕ್ಕೆ

For Dai;y Updates Join Our whatsapp Group

ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬಳಿಕ ದೆಹಲಿಯ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 20ರಂದು ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ‘ಚಲೋ ಸಂಸತ್’ ಮೆರವಣಿಗೆ ನಡೆಸಲು ಸಿಜೆಪಿ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು.

ಸಂಸತ್ತಿನತ್ತ ತೆರಳಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಡೆಸಿದ ಲಾಠಿಚಾರ್ಜ್‌ನಲ್ಲಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಹಾಗೂ ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ನಿಯೋಜಿಸಿ ಜಂತರ್ ಮಂತರ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ಪೊಲೀಸ್ ಭದ್ರತೆಯನ್ನು ಮೀರಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸಂಸತ್ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಅಧಿಕೃತ ಅನುಮತಿ ನೀಡಲಾಗಿರಲಿಲ್ಲ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮುಂಚಿತವಾಗಿಯೇ ಎಚ್ಚರಿಕೆ ನೀಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img