ಜೈಪುರ: ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಜರುಗಿದೆ
ರಾತ್ರಿ 11:30 ರ ಸುಮಾರಿಗೆ ಕಾಲಿಯಾ, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ದೃಶ್ಯ ಕಂಡುಬಂದಿದೆ. ಸ್ಥಳೀಯ ನಿವಾಸಿಗಳು ವಾಹನವನ್ನು ಸರಿಪಡಿಸಿ ಕಾಲಿಯಾಳನ್ನು ರಕ್ಷಿಸಿದರು. ನಂತರ ನಟಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ತಲೆಗೆ ತೀವ್ರ ಪೆಟ್ಟಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.



