ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
25 ವರ್ಷದ ಅಶೋಕ್, ನಾಗರಾಜಪ್ಪ ಮೃತರು. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಉಸಿರು ಚಲ್ಲಿದ್ದಾರೆ.
ಮಂಚೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



