ಬಸ್‌, ಲಾರಿ ನಡುವೆ ಭೀಕರ ಅಪಘಾತ: ನಾಲ್ವರು Spot Death!

0
Spread the love

ಬೆಂಗಳೂರು ಗ್ರಾಮಾಂತರ:- ಬಸ್‌, ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಇಂದು ಜರುಗಿದೆ.

Advertisement

1 ವರ್ಷದ ಮಗು ಸೇರಿ 44 ವರ್ಷದ ಕೇಶವರೆಡ್ಡಿ, 21 ವರ್ಷದ ತುಳಸಿ, 4 ವರ್ಷದ ಪ್ರಣತಿ ಮೃತರು. ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, 16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಿಂದ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ನಿದ್ದೆ ಮಂಪರಿನಲ್ಲಿ ಒವರ್‌ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಬಸ್‌ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣ ಜಖಂಗೊಂಡಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here