ಮೈಸೂರು: ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್-ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿ ಚಂದ್ರು ಹಾಗೂ ಇವರ ಪತ್ನಿ ಪ್ರೇಮಾ ಮೃತಪಟ್ಟ ದಂಪತಿ.
Advertisement
  
ಇವರು ಕೆಲಸದ ನಿಮಿತ್ತ ಬೈಕ್ನಲ್ಲಿ ಹೋಗುತ್ತಿದ್ದರು. ಇದೇ ವೇಳೆ ಅದೇ ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ತೆರಳುತ್ತಿರುವಾಗ ಎರಡರ ನಡುವೆ ಭೀಕರ ಆಕ್ಸಿಡೆಂಟ್ ಸಂಭವಿಸಿದೆ. ಪರಿಣಾಮ ಬೈಕ್ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


