ಎರಡು ರೈಲುಗಳ ಮಧ್ಯೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು!

0
Spread the love

ಛತ್ತೀಸ್​ಗಢ:-ಛತ್ತೀಸ್ ಗಢದ ಬಿಲಸ್ಪುರ ರೈಲ್ವೇ ನಿಲ್ದಾಣದ ಬಳಿ ಪ್ರಯಾಣಿಕ ರೈಲು ಮತ್ತು ಗೂಡ್ಸ್​ ಟ್ರೈನ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಇಂದು ಸಂಜೆ 4 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೇ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲೇ ಬೀಡು ಬಿಟ್ಟಿರುವ ಅಧಿಕಾರಿಗಳು, ಘಟನೆ ಹೇಗಾಯಿತು ಎಂದು ಪರಿಶೀಲನೆ ನಡೆಸ್ತಿದ್ದಾರೆ. ಜೊತೆಗೆ ದುರಂತದಲ್ಲಿ ಸಿಲುಕಿಕೊಂಡವರ ರಕ್ಷಿಸುವ ಕೆಲಸವನ್ನೂ ಮಾಡ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ದುರ್ಘಟನೆಯ ಫೋಟೋ ಹಾಗೂ ವಿಡಿಯೋಗಳು ಹರಿದಾಡಿವೆ. ಘಟನೆ ಬಳಿಕ ರೈಲು ಸಂಚಾರದಲ್ಲಿ ಅಸ್ತವ್ಯಸ್ತವಾಗಿದ್ದು, ಅಧಿಕಾರಿಗಳು ದುರಸ್ತಿಕಾರ್ಯ ನಡೆಸ್ತಿದ್ದಾರೆ ಎಂದು ವರದಿಯಾಗಿದೆ


Spread the love

LEAVE A REPLY

Please enter your comment!
Please enter your name here