ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕು ಸಂತೇಕಲ್ಲಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
Advertisement
ಗ್ಯಾಸ್ ಸಿಲಿಂಡರ್ಗಳು ತುಂಬಿದ್ದ ಲಾರಿ ಮತ್ತು ಬಸ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜರುಗಿದೆ.
ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಚಿಂತಾಮಣಿ, ಹೊಸಕೋಟೆ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.