ಬೆಂಗಳೂರು:- ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವತಾ (24) ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿ ದೇವತಾ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ.
ಎದುರುಗಡೆ ಬ್ಯಾನರ್ ಇರೋದರಿಂದ ಕಾರು ಚಾಲಕ ಸ್ವಲ್ಪ ಬಲಕ್ಕೆ ಬಂದಿದ್ದಾನೆ. ಇದರಿಂದ ದ್ಚಿಚಕ್ರದಲ್ಲಿ ಹೋಗ್ತಿದ್ದ ವಿದ್ಯಾರ್ಥಿನಿ ಆಯತಪ್ಪಿದ್ಲು, ಇದರಿಂದಲೇ ಆ್ಯಕ್ಸಿಡೆಂಟ್ ನಡೆಯಿತು ಅನ್ನೋದು ಕುಟುಂಬಸ್ಥರ ಮಾತಾಗಿದೆ. ಆದ್ರೆ ಸಿಸಿಟಿವಿಯಲ್ಲಿ ವಿದ್ಯಾರ್ಥಿನಿ ಆಯತಪ್ಪಿ ಬೀಳ್ತಿರೋದು ಸೆರೆಯಾಗಿದೆ.