ಕಲಬುರಗಿ:- ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಜರುಗಿದೆ.
ಮಹಿಂದ್ರ ಪಿಕಪ್ ವಾಹನ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಭಾರ್ಗವ್ ಕೃಷ್ಣ (55), ಪತ್ನಿ ಸಂಗೀತಾ (45), ಪುತ್ರ ಉತ್ತಮ್ ರಾಘವನ್ (28) ಹಾಗೂ ಕಾರು ಚಾಲಕ ಮೃತ ದುರ್ದೈವಿಗಳು.
ಮೃತರೆಲ್ಲರೂ ಹೈದರಾಬಾದ್ ನಗರ ನಿವಾಸಿಗಳು ಎನ್ನಲಾಗಿದೆ. ಹೈದರಾಬಾದ್‌ನಿಂದ ಗಾಣಗಾಪುರ ದತ್ತನ ದೇಗುಲಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸಧ್ಯ ಮೃತದೇಹಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



