ಲಕ್ನೋ:- ಉತ್ತರ ಪ್ರದೇಶದ ಹತ್ರಾಸ್‌ನ ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಸಾರಿಗೆ ಬಸ್ವೊಂದು ಮಿನಿ ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 15 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಜರುಗಿದೆ.
ಘಟನೆಯಲ್ಲಿ 16ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಮಿನಿ ಟ್ರಕ್ ಹಾಗೂ ಬಸ್ ಎರಡು ಚಲಿಸುತ್ತಿದ್ದವು. ಈ ವೇಳೆ ಮಿನಿ ಟ್ರಕ್ ಅನ್ನು ಬಸ್ ಓವರ್ ಟೇಕ್ ಮಾಡಲು ಹೋದಾಗ ಭಯಾನಕ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 15 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ.
ಘಟನೆಯಲ್ಲಿ 16ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಿನಿ ಟ್ರಕ್‌ನಲ್ಲಿದ್ದವರು ಹದಿಮೂರನೇ ಔತಣ ಕೂಟ ಮುಗಿಸಿ ಖಂಡೌಲಿ ಬಳಿಯ ಸೇವಾಲಾಲ್ ಎನ್ನುವ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಬಸ್ನಲ್ಲಿದ್ದವರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿ 93ರಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಪ್ರಾಣ ಹಾನಿಗೆ ಕಾರಣವಾಗಿದೆ.