Accident: ಭೀಕರ ಅಪಘಾತ: ಹಿಟ್ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿ!

0
Spread the love

ಬೆಂಗಳೂರು:- ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾದ ಘಟನೆ ಜರುಗಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

Advertisement

22 ವರ್ಷದ ರೋಹಿತ್​​, 22 ವರ್ಷದ ಸುಚಿತ್, 22 ವರ್ಷದ ಹರ್ಷ ಮೃತ ದುರ್ದೈವಿಗಳು. ಈ ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್​​​ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here