ನೆಲಮಂಗಲ:- ನೆಲಮಂಗಲ ನಗರದ ಕುಣಿಗಲ್ ಬೈಪಾಸ್ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ಸಂಭವಿಸಿದೆ.
Advertisement
ಪ್ರಜ್ವಲ್ (22), ಯುವತಿ ಸಹನಾ (21) ಮೃತ ದುರ್ದೈವಿಗಳು. ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಕುಣಿಗಲ್ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಲಾರಿ ಸಮೇತ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.