ಬೆಂಗಳೂರು;- ಉತ್ತರ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಜರುಗಿದೆ
ನಿನ್ನೆ ಬೆಳಿಗ್ಗೆ 8.15 ರ ಸುಮಾರಿಗೆ ಬಿಳಿ ಮತ್ತು ಮರೂನ್ ಕಾರುಗಳ ನಡುವೆ ರೈತರ ಸಂತೆ ಬಳಿಯ ಮೇಲ್ಸೇತುವೆಯ ಮೇಲೆ ಅಪಘಾತ ಸಂಭವಿಸಿದೆ.
ಬಿಳಿ ಕಾರನ್ನು ಮೊಹಿದ್ ಓಡಿಸುತ್ತಿದ್ದ ಮತ್ತು 20-25 ವರ್ಷದೊಳಗಿನ ಮೂವರು ಈ ಕಾರಿನಲ್ಲಿದ್ದರು. ಎಲ್ಲರೂ ದೇವನಹಳ್ಳಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದರು. ಮೋಹಿದ್ ಅವರು ಅತಿ ವೇಗದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಅದರ ಮೇಲೆ ಹಾರಿ ಮತ್ತೊಂದು ಲೇನ್‌ನಲ್ಲಿದ್ದ ಮೆರೂನ್ ಕಾರಿಗೆ ಡಿಕ್ಕಿ ಹೊಡೆದಿದೆ.
“ಮೊಹಿದ್ ಕಳೆದ ರಾತ್ರಿ ನಡೆದ ಪಾರ್ಟಿಯಿಂದ ಹಿಂತಿರುಗುತ್ತಿದ್ದರು. ಚಾಲಕನು ತನ್ನ ಕಾರಿನ ನಿಯಂತ್ರಣವನ್ನು ಕಳೆದುಕೊಂಡು ಮೀಡಿಯನ್‌ಗೆ ಡಿಕ್ಕಿ ಹೊಡೆದಿದ್ದು, ದುರದೃಷ್ಟವಶಾತ್ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ” ಎಂದು ಪೊಲೀಸರು ಹೇಳಿದ್ದಾರೆ.