HomeCrime Newsಶಾಲೆಯ ಆವರಣದಲ್ಲೇ ಶಿಕ್ಷಕಿಯ ಭೀಕರ ಹತ್ಯೆ; 30 ಸೆಕೆಂಡುಗಳಲ್ಲಿ 34 ಬಾರಿ ಚಾಕು ಇರಿದು ಕೊಂದ...

ಶಾಲೆಯ ಆವರಣದಲ್ಲೇ ಶಿಕ್ಷಕಿಯ ಭೀಕರ ಹತ್ಯೆ; 30 ಸೆಕೆಂಡುಗಳಲ್ಲಿ 34 ಬಾರಿ ಚಾಕು ಇರಿದು ಕೊಂದ ಆರೋಪಿ ಅರೆಸ್ಟ್

For Dai;y Updates Join Our whatsapp Group

ಚಂಡೀಗಢ: ಹರಿಯಾಣದ ಫರಿದಾಬಾದ್‌ನಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರನ್ನು ಶಾಲೆಯ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ. ಘಟನೆಗೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಮೃತ ಶಿಕ್ಷಕಿಯನ್ನು 29 ವರ್ಷದ ಸಂಧ್ಯಾ ಎಂದು ಗುರುತಿಸಲಾಗಿದ್ದು, ಆರೋಪಿ ಅಮಿತ್ (21) ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಬುಧವಾರ ಬೆಳಗ್ಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಶಾಲೆಗೆ ಬಂದು ಶಿಕ್ಷಕಿಯೊಂದಿಗೆ ಮಾತನಾಡಬೇಕಿದೆ ಎಂದು ಹೇಳಿ ಶಾಲೆಯ ಗೇಟ್ ಬಳಿ ಕಾಯುತ್ತಿದ್ದ. ಬಳಿಕ ಸಂಧ್ಯಾ ಹೊರಗೆ ಬಂದ ಕೂಡಲೇ ಆಕೆಯನ್ನು ಎಳೆದುಕೊಂಡು ಹೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಆರೋಪಿ ಶಿಕ್ಷಕಿಯ ಕುತ್ತಿಗೆ, ಮುಖ, ಎದೆ ಹಾಗೂ ಹೊಟ್ಟೆ ಭಾಗಗಳಿಗೆ ಪದೇಪದೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡು ಶಿಕ್ಷಕಿ ನೆಲಕ್ಕುರುಳಿದ ಬಳಿಕವೂ ದಾಳಿ ಮುಂದುವರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕಿಯ ಕಿರುಚಾಟ ಕೇಳಿ ಶಾಲೆಯ ಆಡಳಿತಾಧಿಕಾರಿ ಮಧ್ಯಪ್ರವೇಶಿಸಲು ಯತ್ನಿಸಿದಾಗ, ಆರೋಪಿ ಚಾಕು ತೋರಿಸಿ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ಆರೋಪಿ ಅಮಿತ್ ಶಿಕ್ಷಕಿ ಸಂಧ್ಯಾ ಅವರನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಆತ ಕಿರುಕುಳ ಮುಂದುವರಿಸಿದ್ದ. ಕೆಲ ದಿನಗಳ ಹಿಂದೆ ಸಂಧ್ಯಾ ಅವರು ಅಮಿತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದಡಿ ಪೊಲೀಸ್ ದೂರು ದಾಖಲಿಸಿದ್ದರು.

ಈ ಪ್ರಕರಣದ ಸೇಡಿನಿಂದಲೇ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img