ವಿಜಯಸಾಕ್ಷಿ ಸುದ್ದಿ, ಗದಗ
ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಧಾರುಣ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.
ಗದಗ ನಗರದ ದಾಸರ ಓಣಿಯಲ್ಲಿ ಇರುವ ನಗರಸಭೆ ಉಪಾಧ್ಯಕ್ಷೆ ಸುನಂದಾ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ (27) ಕೊಪ್ಪಳ ಮೂಲದ ಪರಶುರಾಮ (55) ಲಕ್ಷ್ಮೀ (45) ಪುತ್ರಿ ಆಕಾಂಕ್ಷ(17) ಹತ್ಯೆಗೊಳಗಾದವರು.
ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.
ಸದ್ದು ಕೇಳುತ್ತಿದ್ದಂತೆಯೇ ಅನುಮಾನಗೊಂಡ ಸಂಬಂಧಿಕರು ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಘಟನೆ ಕುರಿತು ಪ್ರಕಾಶ್ ಬಾಕಳೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಮ್. ಬಿ. ಸಂಕದ, ಡಿವೈಎಸ್ಪಿ ಜೆ.ಎಚ್. ಇನಾಮದಾರ, ನಗರಠಾಣೆಯ ಇನ್ಸ್‌ಪೆಕ್ಟರ್ ಡಿ.ಬಿ.ಪಾಟೀಲ, ಪಿಎಸ್ ಐ ಎಚ್.ಕೆ. ಪಾಟೀಲ ಸೇರಿದಂತೆ ಶ್ವಾನದಳ, ಫಾರಿನ್ ಸಿಕ್ ತಂಡಗಳು ಆಗಮಿಸಿದ್ದು, ಇಂಚಿಂಚೂ ಪರಿಶೀಲನೆ ನಡೆಸಿದೆ.
ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.
ಮನೆಯ ಹಿಂಬಾಗದ ಚರಂಡಿಯಲ್ಲಿ ಜಂಬೆ, ಚಿನ್ನದ ಬಳೆ ಪತ್ತೆಯಾಗಿದೆ, ಒಂದು ಜೊತೆ ಶೋ ಕೂಡ ಪತ್ತೆಯಾಗಿದ್ದು, ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಸಧ್ಯಕ್ಕೆ ಗೊತ್ತಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸತೀಶ್ ರಾಯಬಾಗಿ ಮುದ್ದೇಬಿಹಾಳ ನಾನು ಮುದ್ದೇಬಿಹಾಳಂದಿ ವಾಸಿಸುತ್ತಿದ್ದೇನೆ