ಬೆಳಗಾವಿ: ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.
ಮಹಾದೇವಿ ಗುರಪ್ಪ ತೋಲಗಿ (70) ವರ್ಷದ ಕೊಲೆಯಾದ ದುರ್ದೈವಿಯಾಗಿದ್ದು, ಈರಣ್ಣ ತೋಲಗಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಆಸ್ತಿ ವಿಚಾರದಲ್ಲಿ ತಾಯಿ ಜೊತೆ ಪ್ರತಿದಿನ ಜಗಳ ಮಾಡುತ್ತಿದ್ದನು. ಇದೇ ವಿಚಾರಕ್ಕೆ ಮತ್ತೆ ಕುಡಿದು ಜಗಳ ಮಾಡಿದ್ದು, ಕಟ್ಟಿಗೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದ್ದರಿಂದ ಮಹಾದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



