ಬೆಂಗಳೂರು:- ಭೀಕರ ರಸ್ತೆ ಅಪಘಾತದಲ್ಲಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಜರುಗಿದೆ.
Advertisement
ಬೈಕ್ ನಲ್ಲಿ ಮಾವನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದಿದೆ. ತಲೆಯ ಮೇಲೆ ಟ್ರಕ್‌ನ ಎರಡು ಚಕ್ರ ಹರಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಅಂಬೇಡ್ಕರ್ ಆಸ್ಪತ್ರೆಗೆ ಮೃತ ಬಾಲಕನ ದೇಹ ರವಾನೆ ಮಾಡಲಾಗಿದೆ. ಗಾಯಾಳು ಮಾವನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.
ಇನ್ನೂ ಟ್ರಕ್ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.