ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಾನಂದ (50) ಮೃತ ದುರ್ದೈವಿ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಕೂಡ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement