ಬೀದರ್:- ಭೀಕರ ರಸ್ತೆ ಅಪಘಾತದಲ್ಲಿ ಗಾಣಗಾಪುರಕ್ಕೆ ತೆರಳುತ್ತಿದ್ದ ಮೂವರು ಭಕ್ತರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಜರುಗಿದೆ.
Advertisement
ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತೆಲಂಗಾಣ ಮೂಲದವರು ಎಂಬುದು ತಿಳಿದುಬಂದಿದೆ. ಅವರೆಲ್ಲ ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ ಎನ್ನಲಾಗಿದೆ.


