ಹುಬ್ಬಳ್ಳಿ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಜರುಗಿದೆ.
ಫಯಾಜ್ (25) ಮತ್ತು ಮೋಹಿದ್ ಮೃತರು. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು, ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



