ಆನೇಕಲ್:- ಭೀಕರ ಸರಣಿ ಅಪಘಾತದಲ್ಲಿ 10 ಮಂದಿಗೆ ಗಂಭೀರ ಗಾಯವಾದ ಘಟನೆ ಹೊಸೂರು ಸಮೀಪದ ಪೆರಂಡಪಲ್ಲಿ ಸಂಭವಿಸಿದೆ. 3 ಲಾರಿ, 1 ಬಸ್ ಮತ್ತು 6 ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
Advertisement
ಕಾರುಗಳಲ್ಲಿದ್ದ ಒಟ್ಟು ಹತ್ತು ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ಕೃಷ್ಣಗಿರಿ ಮತ್ತು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಸೂರು ಅಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಅಪಘಾತವಾದ ವಾಹನಗಳನ್ನ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.