ಬೆಂಗಳೂರು: ಗುಜರಾತ್‌ನ ಅಹ್ಮದಾಬಾದ್ ನಿಂದ ಬೆಂಗಳೂರಿನ ಹೆಡ್ ಎ ಎಲ್ ಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆರ್ ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ.
ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿ, ಆರು ಮಂದಿ ಅಭಿಮಾನಿ ಮೃತಪಟ್ಟಿದ್ದಾರೆ.
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಮಹಿಳೆ ಸೇರಿ ನಾಲ್ವರು ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Trending Now



