ವಿಜಯಸಾಕ್ಷಿ ಸುದ್ದಿ, ಗದಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಬರ್ಬರವಾಗಿದೆ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು ಎಂದು ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಕೃತ್ಯಕ್ಕೆ ಕಾರಣರಾದ ಉಗ್ರಗಾಮಿಗಳನ್ನು ಮುಲಾಜಿಲ್ಲದೆ ಸದೆಬಡಿಯುವ ಕೆಲಸ ಆಗಬೇಕು. ನೂರಾರು ಜನ ಪ್ರವಾಸಿಗರು ಇದ್ದ ಜಾಗದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲವೇ, ಸುರಕ್ಷತೆ ಇರಲಿಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಹುಗಾರಿಕೆ ವೈಫಲ್ಯವೇ ಉಗ್ರರ ದಾಳಿಗೆ ಪ್ರಮುಖ ಕಾರಣವಾಗಿದೆ.
ಕೇಂದ್ರ ಗೃಹ ಸಚಿವಾಲಯ ಜವಾಬ್ದಾರಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.