ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಬೆದರಿಕೆ..!

0
Spread the love

ನವದೆಹಲಿ: ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಅಪರಿಚಿತರೊಬ್ಬರು ಮುಂಬೈ ಪೊಲೀಸ್‌ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಇತರ ಏಜೆನ್ಸಿಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಫ್ರಾನ್ಸ್ ಹಾಗೂ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಮೋದಿ ಅವರನ್ನು ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.

ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು.


Spread the love

LEAVE A REPLY

Please enter your comment!
Please enter your name here