ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರಗಿನಮರ ಕ್ಯಾಂಪ್ ನಿವಾಸಿ ಭೂಮಿಕಾ (17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ನಿರ್ಲಕ್ಷ್ಯದಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಸಂಚಾರ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



