ಬಳ್ಳಾರಿ:- ಕಳೆದ ಜನವರಿ 25 ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ಕುಮಾರ್ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಮತ್ತು ರಾಕೇಶ್, ತರುಣ್, ಅರುಣ್, ಭೋಜರಾಜ್, ಸಾಯಿಕುಮಾರ್ ಹಾಗೂ ಇನ್ನೊಬ್ಬ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆದರೆ ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಪ್ರಮುಖ ಆರೋಪಿ ಶ್ರೀಕಾಂತ್ ಕಾಲಿಗೆ ಫೈರಿಂಗ್ ಮಾಡಲಾಗಿದೆ.
ಬಳ್ಳಾರಿ ತಾಲೂಕಿನ ಮೋಕಾ ರಸ್ತೆಯ ಬಳಿ ಆರೋಪಿಗಳಿರುವಿಕೆಯ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ತೆರಳಿದಾಗ ಖಾಕಿ ಮೇಲೆ ಪ್ರಮುಖ ಆರೋಪಿ ಶ್ರೀಕಾಂತ್ ಎಂಬಾತ ಹಲ್ಲೆ ಮಾಡಿದ್ದಾರೆ. ಹೀಗಾಗಿ ಪ್ರಾಣ ರಕ್ಷಣೆಗಾಗಿ ಸಿಪಿಐ ಮಲ್ಲಿಕಾರ್ಜುನ ಸಿಂಧೂರ್ ಅವರು, ಆರೋಪಿ ಶ್ರೀಕಾಂತ್ ಕಾಲಿಗೆ ಗುಂಡು ಹಾರಿಸಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಗುಂಡೇಟಿನಿಂದ ಗಾಯವಾದ ಆರೋಪಿ ಶ್ರೀಕಾಂತ್ ಗೆ ಬಳ್ಳಾರಿಯ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದರಂತೆ ಆರೋಪಿಗಳಿಂದ ಹಲ್ಲೆಗೆ ಒಳಗಾದ ಪೊಲೀಸ್ ಪೇದೆ ಕಾಳಿಂಗ ಅವರಿಗೆ ವಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯ ಆರು ಜನರಲ್ಲಿ ಒಬ್ಬ ಆಂದ್ರ ಮೂಲದ ಆರೋಪಿ ಸೇರಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ.
ಇನ್ನೂ ಗಣಿಜಿಲ್ಲೆಯ ಪೋಲೀಸರ ಕಾರ್ಯಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.