ಗುಜರಾತ್:- ಗುಜರಾತ್ನ ವಡೋದರಾದಲ್ಲಿ ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಜರುಗಿದೆ.
Advertisement
ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.